ರೈತರಿಗೆ ಭರ್ಜರಿ ಗುಡ್ ನ್ಯೂಸ್; ನಿಮಗೆ 10000ರೂ..!
Published By: ಆನಂದಕುಮಾರ ನಾಯಕ್ ಬಾಗಲಕೋಟ ತಾಲೂಕ ರಿಪೋರ್ಟ್
Last Updated Date: 08-Mar-2023

ಚಿತ್ರದುರ್ಗ- : ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದ್ದು, ಬಿತ್ತನೆ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ರೂ.10000/- ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು. ಬಿತ್ತನೆ ಬೀಜ, ಗೊಬ್ಬರ ಖರೀದಿಗಾಗಿ ರೈತರು ಸಾಲ ಮಾಡದಂತೆ ತಡೆಯುಲು ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಭೂ ಸಿರಿ ಯೋಜನೆ ಜಾರಿಗೆ ತರಲಾಗುತ್ತಿದ್ದು, ರೈತರಿಗೆ ಅನುಕೂಲವಾಗುವಂತೆ ರೂ.10000/- ಗಳನ್ನು ರೈತರ ಖಾತೆ ಜಮೆ ಮಾಡಲಾಗುವುದು ಎಂದು ಹೇಳಿದರು.
